ನಮ್ಮೆಲ್ಲರ ನೆಚ್ಚಿನ ವೋಡಾಫೋನ್ ಜೋಜೋ ಈಗ ಸಂಭ್ರಮದಲ್ಲಿದ್ದಾನೆ, ಕಾರಣ ಪೆಟಾ ಸಂಸ್ಥೆ ನೀಡುವ ಪ್ರಾಣಿಪ್ರಿಯ ಜಾಹೀರಾತು ಜೋಜೋ ಪಾಲಾಗಿದೆ. ವೋಡಾಫೋನ್ ನಿರ್ಮಿಸಿರುವ ಹೊಸ ಜೋಜೋ ಜಾಹೀರಾತು ಸರಣಿಗೆ ಪ್ರಸಕ್ತ ಸಾಲಿನ ಪೆಟಾ ಪ್ರಶಸ್ತಿ ದೊರೆತಿದೆ. ಪ್ರಾಣಿಗಳನ್ನು ಹಿಂಸಿಸದೆ ಹಾಗೂ ಬಳಸದೆ ನಿರ್ಮಿಸುವ ಜಾಹೀರಾತುಗಳಿಗೆ ನೀಡುವ ಪ್ರಶಸ್ತಿಯಿದು.
ಅಂದ ಹಾಗೆ ಕಳೆದ ವರ್ಷ ವೋಡಾಫೋನ್ ಸಂಸ್ಥೆ ರೂಪಿಸಿದ್ದ ಹ್ಯಾಪಿ ಟು ಹೆಲ್ಪ್ ಜಾಹೀರಾತಿನಲ್ಲಿ ನಾಯಿಗೆ ಹಿಂಸೆ ನೀಡಲಾಗಿದೆ ಎಂದು ಆಗ ಪೆಟಾ ಸಂಸ್ಥೆ ಆರೋಪಿಸಿತ್ತು.
ಈ ಬಾರಿ ಅದೇ ವೋಡಾಫೋನ್ ಸಂಸ್ಥೆ ನಿರ್ಮಿಸಿರುವ ಜಾಹೀರಾತು ಸರಣಿ ಪ್ರಶಸ್ತಿಗೆ ಪಾತ್ರವಾಗಿದೆ. ಈ ಸಾಧನೆಗಾಗಿ ಜೋಜೋ, ಆತನ ವಾರಸುದಾರ ನಿರ್ವಾಣ ಸಂಸ್ಥೆಯ ನಿರ್ದೇಶಕ ಪ್ರಕಾಶ್ ಮೆಹ್ರಾ ಹಾಗೂ ಜೋಜೋ ಜನ್ಮಕ್ಕೆ ಕಾರಣರಾದ ಪ್ಲಾಟಿಪಸ್ ಸಂಸ್ಥೆಗೆ ಅಭಿನಂದನೆಗಳು. ಜೋಜೋನ ಸಾಧನೆ ಮುಂದುವರಿಯಲಿ, ಆತನ ಹಾಗೂ ವೀಕ್ಷಕರ ಮೊಗದಲ್ಲಿ ಸದಾ ನಗುವಿರಲಿ.
ಸಮನ್ವಯದ ಹಾದಿಯಲ್ಲಿ ಶೇಷಾದ್ರಿ
1 month ago
2 comments:
ನಮ್ಮ ದೂ ಅಭಿನಂದನೆಗಳು...
ಜೋಜೋಗೂ...
ವಿಶಿಷ್ಟ ಮಾಹಿತಿ ತಿಳಿಸಿದ ನಿಮಗೂ ....
dhanyavada shettare...
Post a Comment