ಕನಸು ಕಾಣಲು ಹಣ ನೀಡಬೇಕಿಲ್ಲ, ಆದರೆ ಅದು ವಾಸ್ತವವಾಗಿರಬೇಕು. ಇದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಶ್ಯಾಂ ಬೆನಗಲ್ ಅನಿಸಿಕೆ. ಅವರು ನಡೆದಿದ್ದೂ ಹಾಗೆ, 1970 ರಲ್ಲಿ ಚಿತ್ರ ನಿರ್ದೇಶಿಸುವುದಕ್ಕಿಂತಲೂ ಹಣ ಹೊಂದಿಸುವುದು ಕಷ್ಟದ ಮಾತಾಗಿತ್ತು. ಈ ಸಂದರ್ಭದಲ್ಲಿ ಶ್ಯಾಮ್ ಐಡಿಯಾ ಮಾಡಿದರು. ಗುಜರಾತ್‌ನ ಆಣಂದ್‌ನಲ್ಲಿ ನಡೆದ ಹಾಲು ಉದ್ಯಮದ ಅಭಿವೃದ್ಧಿ ಗಾಥೆಯನ್ನು ಸಿನಿಮಾ ಮಾಡುವ ಉದ್ದೇಶ ಅವರಿಗಿತ್ತು. ಆದರೆ ಹಣವಿರಲಿಲ್ಲ, ಅದಕ್ಕಾಗಿ ರಾಜ್ಯದ 5 ಲಕ್ಷ ಹಾಲು ಉತ್ಪಾದಕರಿಂದ ತಲಾ 2 ರೂ. ಸಂಗ್ರಹಿಸಿ ಮಂಥನ್ ಸಿನಿಮಾ ನಿರ್ದೇಶಿಸಿದರು. ಹಾಲು ಉತ್ಪಾದಕರು ಹಣ ನೀಡಿದ್ದಷ್ಟೇ ಅಲ್ಲ ಟ್ರಕ್, ಟ್ರ್ಯಾಕ್ಟರ್‌ಗಳಲ್ಲಿ ಬಂದು ಸಿನಿಮಾ ನೋಡಿದರು, ಪರಿಣಾಮ ಚಿತ್ರ ಹಿಟ್ ಆಯಿತು, ಪ್ರಶಸ್ತಿಯನ್ನೂ ತಂದುಕೊಟ್ಟಿತು.
ನಮ್ಮ ಸಾಂಗತ್ಯ ಬ್ಲಾಗ್ನಲ್ಲಿ ನಾನು ಬರೆದ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ...http://saangatya.wordpress.com/
1 comment:
а все таки: мне понравилось.. а82ч
Post a Comment